ಚಿಕ್ಕಬಳ್ಳಾಪುರ: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದು ಪರಿಶ್ರಮದಿಂದ ಅಲ್ಲ. ಅವರ ತಂದೆಯ ಆಶೀರ್ವಾದದಿಂದ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದರು ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಎಂದು ಹೇಳಿದರು. ಕ್ಷೇತ್ರದ ಮಂಚೇನಹಳ್ಳಿಯಲ್ಲಿ ನಡೆದ ರೋಡ್ ಶೋದಲ್ಲಿ ಮಾತನಾಡಿ, ನಾನು ಸಾಮಾನ್ಯ ಶಿಕ್ಷಕನ ಮಗನಾಗಿ ಜನರ ಮಧ್ಯೆಯಿಂದ ಗೆದ್ದು ಬಂದವನು.
ಒಂದು ಕಣ್ಣಿಗೆ ಸುಣ್ಣ ಮತ್ತೂಂದು ಕಣ್ಣಿಗೆ ಬೆಣ್ಣೆ ಇಟ್ಟಿದ್ದರಿಂದ ನಾನು ಮೈತ್ರಿ ಸರ್ಕಾರ ಉರುಳಿಸಿದೆ ಎಂದು ಎಚ್ಡಿಕೆ ವಿರುದ್ಧ ವಾಗ್ಧಾಳಿ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ 2 ಲಕ್ಷ ಕೋಟಿ ಬಜೆಟ್ ಮಂಡಿಸಿದರು. ಅವರು ಎಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಎಂಬುದನ್ನು ನಾವು ಕೇಳಬೇಕಿದೆ. ನಾನು ತಂದೆ ಹೆಸರು ಹೇಳಿಕೊಂಡು ಬಂದವನಲ್ಲ. ಕಮಿಷನ್‌ಗಾಗಿ ನಾನು ಮೆಡಿಕಲ್ ಕಾಲೇಜು ತರುವ ನೀಚ ಕೆಲಸ ಮಾಡಿಲ್ಲ ಎಂದರು.
ರಾಜ್ಯದ ರಕ್ಷಣೆಗಾಗಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಡಾ.ಕೆ.ಸುಧಾಕರ್ ಅವರ ರಾಜೀನಾಮೆಗೆ ಪ್ರೋತ್ಸಾಹ ಮಾಡಿದವರಲ್ಲಿ ನಾನೂ ಒಬ್ಬ. ಇದನ್ನು ಸಂತೋಷದಿಂದಲೇ ನಿಮ್ಮ ಮುಂದೆ ಒಪ್ಪಿಕೊಳ್ಳುತ್ತೇನೆ.
-ಎಸ್.ಎಂ.ಕೃಷ್ಣ, ಮಾಜಿ ಮುಖ್ಯಮಂತ್ರಿ