Advertisement
ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂಬ ತರ್ಕ ಬಳಸುವ ಕುಮಾರಸ್ವಾಮಿ ಅವರಿಗೆ 2018 ರ ಮೈತ್ರಿಯ ವೇಳೆ ಕಾಂಗ್ರೆಸ್ ಪಕ್ಷವು ಹೆಚ್ಚು ಮತ ಹೊಂದಿತ್ತು ಎಂಬ ಅಂಶವನ್ನು ಬದಿಗೆ ಸರಿಸಿ ತಾವೇ ಮುಖ್ಯಮಂತ್ರಿ ಆಗುತ್ತಾರೆ. ದಿನಕ್ಕೊಮ್ಮೆ ಗಂಟೆಗೊಮ್ಮೆ ಬದಲಾಗುವ ಇವರ ರೀತಿಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ವತಃ ಜೆಡಿಎಸ್ ಪಕ್ಷದ ಕಾರ್ಯಕರ್ತರೇ ಸೋತಿದ್ದು ಇವರ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ಅವರು ಭಾನುವಾರ ಇಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Related Articles
Advertisement
ಅಧಿಕಾರ ಪಡೆಯುವುದಕ್ಕೆ ಮಾತ್ರ ಜಾತ್ಯತೀತತೆ ಎಂಬ ಪದವನ್ನು ಬಳಸಿಕೊಳ್ಳುವ ಕುಮಾರಸ್ವಾಮಿ ಅವರಿಗೆ, ಜಾತ್ಯತೀತತೆ ಎಂಬುದು ಅಧಿಕಾರವನ್ನು ಬಿಟ್ಟು ಕೊಡಬೇಕಾದಾಗಲೂ ಕೂಡಾ ಸಮನಾಗಿರುತ್ತದೆ ಎಂಬ ಅಂಶವು ಅರ್ಥ ಅರ್ಥವಾಗಬೇಕಲ್ಲವೇ? ಲೋಕಸಭೆಯಲ್ಲಿ ಸೋತ ದೇವೇಗೌಡರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರಾಜ್ಯಸಭೆಗೆ ಕಳಿಸಿದೆ. 37 ಸ್ಥಾನವಿದ್ದ ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನವನ್ನೂ ನೀಡಿದೆ. ಈ ನಡೆಯನ್ನು ಜೆಡಿಎಸ್ ಗೌರವಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದೇ ಇದ್ದ ಮೇಲೆ, ಅವರು ಯಾವ ಜಾತ್ಯತೀತತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಕೇಳಿದ್ದಾರೆ.
ಜಾತ್ಯತೀತ ರಾಜಕಾರಣ ಎಂಬುದು ಗಂಟೆಗೊಂದು ಸಲ ಬದಲಿಸುವ ಇವರ ಅಧಿಕಾರ ಮೋಹಿ ಮನಸ್ಥಿತಿಗೆ ಬಲಿಯಾಗುತ್ತದೆಯಲ್ಲಾ ಎಂದು ನೆನೆದು ಬೇಸರವಾಗುತ್ತಿದೆ ಎಂದು ಡಾ. ಮಹದೇವಪ್ಪ ಹೇಳಿದ್ದಾರೆ.