Advertisement

Politics: “ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು”- ಎಚ್‌.ಡಿ. ದೇವೇಗೌಡ

12:10 AM Feb 03, 2024 | Team Udayavani |

ಹಾಸನ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ-ರಾಷ್ಟ್ರಧ್ವಜ ವಿವಾದ ಸಂದರ್ಭ ನಡೆದ ಪ್ರತಿಭಟನೆ ವೇಳೆ ರಾಜ್ಯ ಜೆಡಿಎಸ್‌ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಅವರು ಜೆಡಿಎಸ್‌ನ ಹಸುರು ಶಾಲು ಧರಿಸಬೇಕಾಗಿತ್ತು. ನಾನು ಮೋದಿ ಜತೆ ವೇದಿಕೆ ಹಂಚಿಕೊಂಡರೂ, ಕೇಸರಿ ಶಾಲು ಧರಿಸುವುದಿಲ್ಲ. ಹಸುರು ಶಾಲು ಧರಿಸುವೆ ಎಂದು ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಯಾರೋ ಕುಮಾರಸ್ವಾಮಿ ಅವರಿಗೆ ಕೇಸರಿ ಶಾಲು ಹಾಕಿರಬಹುದು. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವುದು ಬೇಡ. ಆದರೆ ನಮ್ಮತನವನ್ನು ನಾವು ಯಾವಾಗಲೂ ಉಳಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಗೊಂದಲಗಳು ಉಂಟಾಗದಂತೆ ಪಕ್ಷದ ಮುಖಂಡರು ನಡೆದುಕೊಳ್ಳುವರು ಎಂದರು.

ಡ್ಯಾಮೇಜ್‌ ಕಂಟ್ರೋಲ್‌
ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯದ ಕೆರಗೋಡಿನಲ್ಲಿ ನಡೆದ ಪ್ರತಿಭಟನೆ ವೇಳೆ ಕೇಸರಿ ಶಾಲು ಧರಿಸಿದ್ದು ರಾಜ್ಯ ರಾಜಕಾರಣ ದಲ್ಲಿ ಸಂಚಲನವನ್ನುಂಟು ಮಾಡಿತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ವಿಲೀನವಾಗಬಹುದು ಎಂಬ ವಿಶ್ಲೇಷಣೆಯೂ ಆರಂಭ
ವಾಗಿತ್ತು. ತತ್‌ಕ್ಷಣವೇ ಎಚ್ಚೆತ್ತುಕೊಂಡಿರುವ ದೇವೇ ಗೌಡರು ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದನ್ನು ಖಂಡಿಸುವ ಧಾಟಿಯಲ್ಲಿ ಪ್ರತಿಕ್ರಿಯಿಸಿರುವುದು ಡ್ಯಾಮೇಜ್‌ ಕಂಟ್ರೋಲ್‌ ಮಾಡಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next