Advertisement

ಕುಮಾರಸ್ವಾಮಿ ರಾಜೀನಾಮೆ ನೀಡುವುದು ಸೂಕ್ತ: ಹೊರಟ್ಟಿ

11:30 PM Jul 07, 2019 | Team Udayavani |

ಬೆಳಗಾವಿ: “ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯದಲ್ಲಿ ಒಬ್ಬರಿಗೊಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಶಾಸಕರ ನಡೆ ಗಮನಿಸುತ್ತ ಹೋದರೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿಲ್ಲ ಎನ್ನುವುದು ಗೋಚರವಾಗುತ್ತಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಲ್ಲ ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ಪೀಕರ್‌ ರಮೇಶ್‌ಕುಮಾರ್‌ ಕೂಡಲೇ ಅಂಗೀಕರಿಸಬೇಕು. ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅತೃಪ್ತ ಶಾಸಕರ ಸಾಮೂಹಿಕ ರಾಜೀನಾಮೆ ಹಿಂದೆ ಒಬ್ಬರಲ್ಲ, ಅನೇಕ ಮಂದಿಯ ಕೈವಾಡವಿದೆ.

ಅತೃಪ್ತ ಮೈತ್ರಿ ಪಕ್ಷಗಳ ಶಾಸಕರ ಮನವೊಲಿಸುವುದು ಸೂಕ್ತವಲ್ಲ. ಈ ಬಾರಿ ರಾಜೀನಾಮೆ ಕೊಡುವಾಗ ಹೊಸದೊಂದು ಪದ್ಧತಿ ನೋಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸುವ ಪರಂಪರೆ ಇತ್ತು. ಕೆಲವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next