Advertisement

ಕುಮಾರಸ್ವಾಮಿ –ಸುಧಾಕರ್‌ ಟ್ವೀಟ್‌ ವಾರ್‌

01:48 AM Aug 21, 2020 | mahesh |

ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್‌ ಹಾಗೂ ಕೃಷಿ ಚಟುವಟಿಕೆಗಳಿಗೆ ರೈತರಿಗೆ ರಸಗೊಬ್ಬರ ಪೂರೈಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಅವರು “ಟ್ವೀಟ್‌ ವಾರ್‌’ ನಡೆಸಿದ್ದಾರೆ.

Advertisement

ಸರಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ತಿಣುಕಾಡುತ್ತಿರುವ ಸರಕಾರ ರೈತರಿಗೆ ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಉತ್ತರ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸುಧಾಕರ್‌ ಟಾಂಗ್‌
ಇದಕ್ಕೆ ಪ್ರತಿಕ್ರಿಯಿಸಿರುವ ಡಾ| ಕೆ. ಸುಧಾಕರ್‌, “ಕುಮಾರಸ್ವಾಮಿ ಅವರೇ, ಸರಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸಲು ನಮ್ಮ ಸರಕಾರ ಸಮರ್ಥವಾಗಿದೆ. ಈಗಾಗಲೇ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದು ಹೋದ ಸಮಯ ಮತ್ತು ಕೈ ತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು’ ಎಂದು ಹೇಳಿದ್ದಾರೆ.

ಎಚ್‌ಡಿಕೆ ತಿರುಗೇಟು
ಇದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ಕೊಪ್ಪಳದ ರೈತರೊಬ್ಬರು ಒಂದು ವಾರ ಅಲೆದರೂ ಗೊಬ್ಬರ ಸಿಕ್ಕಿಲ್ಲ, ಆಸ್ಪತ್ರೆ ಗಳಲ್ಲಿ ರೋಗಿಗಳು ಆಕ್ಸಿಜನ್‌ ಇಲ್ಲದೆ ನರಳುತ್ತಿರುವುದು ಸರಕಾರ ಸಶಕ್ತವಾಗಿರುವ ಲಕ್ಷಣವೋ, ನಿಶ್ಶಕ್ತವಾಗಿರುವ ಲಕ್ಷಣವೋ ಎಂದು ಪ್ರಶ್ನಿಸಿದ್ದು, ಇದಕ್ಕೆ ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next