Advertisement
ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಿಆರ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೇಮಂತ್ ಸೊರೇನ್, ಬಿಎಸ್ಪಿ ನಾಯಕಿ ಮಾಯಾವತಿ, ಸಿಪಿಎಂನ ಸೀತಾರಾಮ್ ಯೆಚೂರಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಕೇರಳ ಸಿಎಂ ಪಿಣರಾಯಿ ವಿಜಯನ್, ಪುದುಚೇರಿ ಸಿಎಂ ನಾರಾಯಣ ಸ್ವಾಮಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಡಿ.ರಾಜಾ, ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.ಪಂಚೆ, ಶರ್ಟ್ ನೊಂದಿಗೆ ಶ್ವೇತವರ್ಣದ ಧಿರಿಸಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ನೂತನ ಸಿಎಂ ಕುಮಾರಸ್ವಾಮಿ ಅಮ್ಮನ ಆಶೀರ್ವಾದ ಪಡೆದರು.
Related Articles
Advertisement
ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಮಾಯಾವತಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಸೀತಾರಾಮ ಯೆಚೂರಿ, ಶರದ್ ಯಾದವ್ ಸೇರಿದಂತೆ ಬಿಜೆಪಿಯೇತರ ನಾಯಕರು ಭಾಗಿಯಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳು ಶಕ್ತಿಪ್ರದರ್ಶನ ತೋರ್ಪಡಿಸಿದ್ದಾರೆ.
ಪ್ರಮಾಣವಚನಕ್ಕೆ ಬಿಜೆಪಿ ಶಾಸಕರು ಗೈರು:
ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಿದ್ದರು.