ಮೈಸೂರು: ರಮೇಶ್ ಜಾರಕಿಹೋಳಿ ಸಿಡಿ ಕೇಸ್‌ನಲ್ಲಿ ಡಿಕೆಶಿ ಹೆಸರು ಎಂಬ ವಿಚಾರ ಸಂಬಂಧ ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿಲ್ಲ. ಡಿಕೆ ಶಿವಕುಮಾರ್ ಅವರು ಅವರ ಹೆಸರನ್ನು ಅವರೇ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆ. ಅವರೇ ಮಾಡಿದ್ದಾರೆಂದು ಯಾರಾದರೂ ಹೇಳಿದರಾ ಎಂದು ಪ್ರಶ್ನಿಸಿದರು.
ಬಿಜೆಪಿಯಲ್ಲೇ ಒಬ್ಬರು ಮಹಾನ್ ನಾಯಕರು ಬೆಳೆಯುತ್ತಿದ್ದಾರೆ. ಯಾವ ಮಹಾನ್ ನಾಯಕರು ಅಂತ ಹೇಳಿದ್ದಾರೆ ಗೊತ್ತಿಲ್ಲ. ಡಿಕೆಶಿಯವರು ತಾವೆ ಅಂತ ಯಾಕೆ ಅಂದುಕೊಂಡರೋ ಗೊತ್ತಿಲ್ಲ ಎಂದರು.
ಇದನ್ನೂ ಓದಿ:ಗಟ್ಟಿ ಚರ್ಮದ ಸರ್ಕಾರ, ಸಾಮಾನ್ಯ ಜ್ಞಾನ ಇರೋರು ಹೀಗೆ ಮಾಡಲ್ಲ: ಡಿಕೆಶಿ ವಾಗ್ದಾಳಿ
ಡಿಕೆ.ಶಿವಕುಮಾರ್ ಬಹಳ ಮೆಚುರ್ಡ್ ಪೊಲಿಟಿಶಿಯನ್. ಅವರಿಗೆ ಇರುವ ಅನುಭವ ನಮಗೂ ಇಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆ ಗೊತ್ತಿಲ್ಲ ಎಂದರು.
ಈ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಯಾರಿಗೂ ಗಂಭೀರತೆ ಇಲ್ಲ. ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು. ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಎಲ್ಲವನ್ನೂ ಎಸ್ ಐಟಿ ಯವರೇ ನೋಡಿಕೊಳ್ಳುತ್ತಾರೆ: ಗೃಹ ಸಚಿವ ಬೊಮ್ಮಾಯಿ