Advertisement

ಲಾಕ್ ಡೌನ್ ಬಳಿಕ ಆರ್ಥಿಕ ಸ್ಥಿತಿ ಸುಧಾರಿಸಲು ಸರಕಾರಕ್ಕೆ ಕುಮಾರಸ್ವಾಮಿ ಸಲಹೆಗಳು

08:09 AM Apr 28, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ಸದ್ಯ ದೇಶದೆಲ್ಲೆಡೆ ಲಾಕ್ ಡೌನ್ ಇದೆ. ಈ ಕಾರಣದಿಂದ ದೇಶದ ಆರ್ಥಿಕ ಸ್ಥಿತಿಗಿತಿಗೆ ಹೊಡೆತ ಬಿದ್ದಿದೆ. ಲಾಕ್ ಡೌನ್ ತೆರವಿನ ಬಳಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

Advertisement

ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಜನರ ಜೀವನವಚ್ಚ ಕಡಿಮೆ ಮಾಡುವ ಬಗ್ಗೆ ಚಿಂತಿಸಬೇಕು ಎಂದಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗಳು ಇಲ್ಲಿವೆ.

1.ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕಯ್ಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.

2.ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು.

Advertisement

3.ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ.

4.ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.

5.ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು  ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next