Advertisement

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11:32 PM May 12, 2024 | Team Udayavani |

ಮದ್ದೂರು: ಮತ್ತೊಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿಕೊಂಡೇ ಗ್ರಾ.ಪಂ.ನಿಂದ ವಿಧಾನಸಭೆವರೆಗೂ ಬಂದಿರುವ ಎಚ್‌.ಡಿ.ಕುಮಾರಸ್ವಾಮಿಗೆ ಮುಂದೊಂದು ದಿನ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸ್ಥಿತಿಯೇ ಬರಲಿದೆ ಎಂದು ಕಾಂಗ್ರೆಸ್‌ ಶಾಸಕ ಕೆ.ಎಂ. ಉದಯ್‌ ಹೇಳಿದರು.

Advertisement

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನವರು ಮಾಡುತ್ತಿರುವ ಪ್ರತಿಭಟನೆ ಯಾವ ಪುರುಷಾರ್ಥಕ್ಕೆ? ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಅಪಪ್ರಚಾರ ಮಾಡುತ್ತಿರುವ ಕುಮಾರಸ್ವಾಮಿ ಸಾಚಾನಾ? ರಾಧಿಕಾ ಅವರನ್ನು ಪತ್ನಿ ರೀತಿಯಲ್ಲಿ ಕಾಣುತ್ತಾರಾ? ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡಲಿದ್ದಾರೆ ಎಂದರು.

ದೇವೇಗೌಡರು ಆರು ದಶಕಗಳ ಕಷ್ಟದ ಹಾದಿಯಲ್ಲಿ ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ಸಹಿತ ಅವರ ಕುಟುಂಬದ ಸದಸ್ಯರು ಬೀದಿಗೆ ತಂದಿದ್ದಾರೆ. ಎಚ್‌.ಡಿ.ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ನಮ್ಮ ಕುಟುಂಬಕ್ಕೆ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next