Advertisement

ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ

09:06 AM Sep 22, 2021 | Team Udayavani |

ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ.

ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ.

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ. ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು.

Advertisement

ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂದು ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next