Kumbh Sah’AI’yak ಹೆಸರಿನ ಈ ಚಾಟ್‌ಬಾಟ್ ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇದೊಂದು ಆ್ಯಪ್ ಆಗಿದ್ದು, “ಓಲಾ ಕೃತ್ರಿಮ್’ ಇದನ್ನು ತಯಾರು ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ, ಮಲಯಾಳ, ಉರ್ದು, ಗುಜರಾತಿ, ಪಂಜಾಬಿ ಮತ್ತು ಬೆಂಗಾಲಿಗಳಲ್ಲಿ ಇದು ಮಾಹಿತಿ ಒದಗಿಸಲಿದೆ.
Advertisement
ಅಲ್ಲದೇ ಇಡೀ ಕುಂಭಮೇಳದ ಮ್ಯಾಪ್ ಒದಗಿಸಲಿದ್ದು, ಕುಂಭಮೇಳದ ಇತಿಹಾಸ, ಪದ್ಧತಿ ಸೇರಿದಂತೆ ಹಲವು ಮಾಹಿತಿಯನ್ನು ಒದಗಿಸಲಿದೆ.
ಮಹಾಕುಂಭ ಮೇಳದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಶುಕ್ರವಾರ 5,500 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. 7 ರೈಲ್ವೇ ಮೇಲ್ಸೇತುವೆ, ದ್ವಿಪದ ಮಾರ್ಗಗಳು, ಕಲುಷಿತ ನೀರು ಶುದ್ಧೀಕರಣ ಘಟಕ, ವಿದ್ಯುತ್ ಪೂರೈಕೆ, ದೇವಾಲಯಗಳ ಕಾರಿಡಾರ್ ಸೇರಿದಂತೆ 167 ಅಭಿವೃದ್ಧಿ ಯೋಜನೆಗಳು ಇದರಲ್ಲಿ ಸೇರಿವೆ.