Advertisement

ಕುಂಭಮೇಳಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಕಡೆಗಣನೆ

07:35 AM Feb 17, 2019 | Team Udayavani |

ತಿ.ನರಸೀಪುರ: ಕುಂಭಮೇಳಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳನ್ನು ತಾಲೂಕು ಆಡಳಿತ ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿರುವುದಾಗಿ ತಾಪಂ ಸದಸ್ಯ ಕಿರಗಸೂರು ಎಂ.ರಮೇಶ್‌ ತಿಳಿಸಿದರು.

Advertisement

ಪಟ್ಟಣದ ತಾಲೂಕು ಪರ್ತಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳನ್ನು ಅಧಿಕಾರಿಗಳು ಏನೆಂದು ತಿಳಿದಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು. ಸಂವಿಧಾನದ ಅಡಿಯಲ್ಲಿ ಶಾಸಕಾಂಗ-ಕಾರ್ಯಾಂಗ-ನ್ಯಾಯಾಂಗ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಸಕಾಂಗದಲ್ಲಿರುವ ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾರ್ಯಾಂಗವನ್ನು ಜಾರಿಗೆ ತರುವುದಾದರು ಸಾಧ್ಯವೇ ಎಂದು ಪ್ರಶ್ನಿಸಿದರು.

ತವರೂರಲ್ಲಿ ಇತಿಹಾಸ ಪ್ರಸಿದ್ಧ ಕುಂಭಮೇಳ 3 ವರ್ಷಕ್ಕೊಮ್ಮೆ ನಡೆಯುತ್ತಿದ್ದು, ಇದರ ಕಾರ್ಯಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳದೆ  ಇವರಿಗಿಷ್ಟ ಬಂದ ರೀತಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವುದಾದರೆ ನಮ್ಮ ಅವಶ್ಯಕತೆಯಾದರು ಏನು? ಇದಕ್ಕೆ ಅಧಿಕಾರಿಗಳು ಉತ್ತರ ನೀಡಬೇಕು ಎಂದು ಕೇಳಿದರು.

ಆದಿಚುಂಚನಗಿರಿ ಶಾಖಾ ಮಠದ ಶ್ರೀಗಳು ಬಂದ ಸಂದರ್ಭದಲ್ಲಿ ಪರ್ತಕರ್ತರು, ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವ ಬಗ್ಗೆ ಗಮನ ಸೆಳೆದಾಗ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ತಾಲೂಕಿನ ಸಮಸ್ತ ಸಾರ್ವಜನಿಕರು, ಜಿಪಂ, ತಾಪಂ, ಗ್ರಾಪಂ ಚುನಾಯಿತ ಜನಪ್ರತಿನಿಧಿಗಳು ಇದರಲ್ಲಿ ತೊಡಗಿಸಿಕೊಂಡು- 

ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಹೇಳಿದ್ದರೂ ಇಲ್ಲಿಯವರೆಗೂ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ನಮ್ಮನ್ನು ಕ್ಯಾರೇ ಎನ್ನದೇ ಆನೇ ನಡೆದದ್ದೇ ದಾರಿ ಎಂಬಂತೆ ನಡೆಯುತ್ತಿದ್ದಾರೆ.ಇದಕ್ಕೆ ನಮ್ಮ ಪ್ರಬಲ ವಿರೋಧವಿದ್ದು, 3 ದಿನಗಳ ಕಾರ್ಯಕ್ರಮ ನಾವು ಬಷ್ಕರಿಸುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ರಂಗಸ್ವಾಮಿ, ಸಾಜಿದ್‌ಅಹಮದ್‌, ಉಹೇಶ್‌, ಜವರಯ್ಯ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next