ತೆಕ್ಕಟ್ಟೆ : ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ, ಅಷ್ಟೋತ್ತರ ಸಹಸರ ನಾಳಿಕೇರ ಗಣಯಾಗವು ಕೋವಿಡ್ 19 ನಿಯಮಾನುಸಾರ ಡಿ.7 ರಂದು ಸಂಪ್ರದಾಯದಂತೆ ಸಂಭ್ರಮದಿಂದ ನಡೆಯಿತು.
35 ಸಾವಿರಕ್ಕೂ ಅಧಿಕ ಭಕ್ತರಿಂದ ದರ್ಶನ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಕ್ಕೆ ಮುಂಜಾನೆಯಿಂದಲೂ ನಂಬಿದ ಸಾವಿರಾರು ಭಕ್ತರು ಶ್ರೀ ದೇಗುಲಕ್ಕೆ ಆಗಮಿಸಿದ್ದು , ಸುಮಾರು 35 ಸಾವಿರಕ್ಕೂ ಅಧಿಕ ಭಕ್ತರು ದರ್ಶನ ಪಡೆದರು.
ದೇವಳವನ್ನು ಸಂಪೂರ್ಣ ಹೂವಿನ ಅಲಂಕಾರ ಮಾಡಲಾಗಿದ್ದು ,ಆಕರ್ಷಕ ಕೀಲು ಕದುರೆ ಹಾಗೂ ಗೊಂಬೆಗಳ ಕುಣಿತಗಳು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ನಂಬಿದ ಭಕ್ತರು ನೆರೆದಿದ್ದರು.
ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಹಿರಿಯ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕ ಕೆ.ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಅರ್ಚಕ ಮಂಡಳಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.