Advertisement

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

07:01 PM Apr 19, 2024 | Team Udayavani |

ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

Advertisement

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶಾರದಾ ಶೆಟ್ಟಿಯವರು ಪಕ್ಷ ಸೇರ್ಪಡೆಗೊಂಡರು.ಸಿಎಂ ಹಾಗೂ ಡಿಸಿಎಂ, ಶಾರದಾ ಶೆಟ್ಟಿಯವರಿಗೆ ಕಾಂಗ್ರೆಸ್ ಬಾವುಟ ನೀಡಿ,ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿಕೊಂಡರು.

ಟಿಕೆಟ್ ಕೈ ತಪ್ಪಿದ ಬಳಿಕ ವಿಧಾನಸಭಾ ಚುನಾವಣೆಯ ವೇಳೆ ಪಕ್ಷದಿಂದ ದೂರವುಳಿದಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಚಟುವಟಿಕೆಗಳನ್ನ ನಡೆಸಲು ಸಕ್ರಿಯರಾಗಲಿದ್ದಾರೆ.ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಲ್ಲರೂ ಒಗ್ಗೂಡಿ ಚುನಾವಣೆಯನ್ನ ಎದುರಿಸೋಣ. ಆ ಮೂಲಕ ಪಕ್ಷಕ್ಕಾಗಿ ದುಡಿದು,ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಕರೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next