Advertisement
ಅವರು ಬುಧವಾರ ಭಂಡಾರ್‌ಕಾರ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜನ್ನು ಪ್ರತಿನಿಧಿಸಿ, ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ್‍ಯಾಂಕ್ ವಿಜೇತರಾದ ಶಾಂಭವಿ, ಸಂಧ್ಯಾ, ಸಂಗೀತಾ ಯು.ಎಸ್. ಶೆಣೈ, ರಜನಿ, ಕಾರ್ತಿಕ್ ಕಾಮತ್ ಅವರನ್ನು ಸಮ್ಮಾನಿಸಲಾಯಿತು.
Related Articles
Advertisement
ಸಮ್ಮಾನಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿಗೊಂಡ ಪ್ರಾಧ್ಯಾಪಕರಾದ ಪ್ರೊ| ಉದಯ ಕುಮಾರ್, ನಾರಾಯಣ ತಂತ್ರಿ, ಜಿ.ಎಸ್. ಹೆಗಡೆ, ಡಾ| ಪಾರ್ವತಿ ಜಿ. ಐತಾಳ್ ಹಾಗೂ ಬೋಧಕೇತರ ಸಿಬಂದಿ ಸರಸ್ವತಿ ಬಾಯಿ ಅವರನ್ನು ಸಮ್ಮಾನಿಸಲಾಯಿತು. ಆಟ, ಪಾಠಗಳಲ್ಲಿ ತೊಡಗಿಸಿ
ಆಟ, ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳೆಲ್ಲದರಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಜೀವನ ಸುಖಮಯವಾಗಿಸಿಕೊಳ್ಳಲು ಸಾಧ್ಯ. ಕಾಲೇಜು ಎನ್ನುವುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಅದನ್ನು ಸಾಧ್ಯವಾದ ಮಟ್ಟಿಗೆ ಆಸ್ವಾದಿಸಿ ಎಂದು ಭಂಡಾರ್‌ಕಾರ್ ಕಾಲೇಜಿನ ಹಳೆ ವಿದ್ಯಾರ್ಥಿ ಮಹಾಬಲೇಶ್ವರ ಎಂ.ಎಸ್. ಹೇಳಿದರು.