ಕುಂದಾಪುರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಸಂಬಂಧ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಸಹಕಾರಿಯಾಗುವಂತೆ ಕುಂದಾಪುರ ಉಪವಿಭಾಗದ 5 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ.
ಬೈಂದೂರು ತಾಲೂಕಿನ ಶಿರೂರು, ಕೊಲ್ಲೂರು, ಕುಂದಾಪುರ ತಾಲೂಕಿನ ಕಂಡ್ಲೂರು, ಹಾಲಾಡಿ, ಹೊಸಂಗಡಿಯಲ್ಲಿ ಅಕ್ರಮ ಮದ್ಯ / ಬಿಯರ್ ತಯಾರಿಕೆ / ದಾಸ್ತಾನು/ ಸಾಗಾಣಿಕೆಯನ್ನು ನಿಯಂತ್ರಿಸುವ ಸಲುವಾಗಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ.
ಇನ್ನು ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪೇಟೆಯಲ್ಲಿ ಕೋಟ ಪೊಲೀಸ್ ಠಾಣೆಯ ವತಿಯಿಂದ ಚೆಕ್ ಪೋಸ್ಟ್ ಆರಂಭಿಸಲಾಗಿದೆ.
ಈ ಚೆಕ್ ಪೋಸ್ಟ್‌ಗಳು ನಿರಂತರ 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಿದ್ದು, ಹೊರಬರುವ ಹಾಗೂ ಹೊರ ಹೋಗುವ ಎಲ್ಲ ವಾಹನಗಳನ್ನು ತಪಾಸಣೆ ನಡೆಸಿಯೇ ಕಳುಹಿಸಲಾಗುತ್ತಿದೆ ಎಂದು ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.