ಕುಂದಾಪುರ: ಮಿನಿ ಟಿಪ್ಪರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಕುಮಾರ್ ಎಂಬವರು ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
Advertisement
ಅಪಘಾತದಲ್ಲಿ ತಲೆಗೆ, ಮೈ ಕೈಗೆ ಗಂಭೀರ ಗಾಯಗೊಂಡಿದ್ದ ಕುಮಾರ್ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಸಾವಿಗೆ ಕಾರಣ ಎನ್ನಲಾಗಿದೆ. ಚಾಲಕ ಮಣಿಕಂಠನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.