Advertisement

ಕುಂದಾಪುರದಲ್ಲಿ 163 ಬಾರಿ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕೇಸು ದಾಖಲು

05:07 PM Jul 13, 2020 | sudhir |

ಕುಂದಾಪುರ: ಒಂದೆರಡಲ್ಲ, ಬರೋಬ್ಬರಿ 163 ಸಲ ಹೋಮ್‌ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ, ಹೊರಗಡೆ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್‌ ಸಿಂಗ್‌ ಹೋಮ್‌ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ಆರೋಪಿ. ಈತ ಕುಂದಾಪುರದಲ್ಲಿ ಗ್ಲಾಸ್‌ ಮತ್ತು ಫ್ಲೈ ವುಡ್‌ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಜೂ. 29 ರಂದು ಕೋಟೇಶ್ವರದ ಬೈಪಾಸ್‌ ಬಳಿಯ ಬಾಡಿಗೆ ಮನೆಗೆ ಬಂದಿದ್ದು, ಆತನಿಗೆ ಜು.13 ರವರೆಗೆ ಹೋಂ ಕ್ವಾರಂಟೈನ್‌ ನೀಡಲಾಗಿತ್ತು.

ಆದರೆ ಆತ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್‌ಗ‌ಳಿಗೆ ತಿರುಗಾಡುತ್ತಿರುವ ಬಗ್ಗೆ 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್‌ ಟ್ರ್ಯಾಕರ್‌ನಿಂದ ತಿಳಿದು ಬಂದಿದೆ.

ಈ ಬಗ್ಗೆ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್‌.ಜಿ. ಭಟ್‌ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್‌ ಸಿಂಗ್‌ ವಿರುದ್ಧ ಐಪಿಸಿ ಸೆಕ್ಷನ್‌ 269, 270 ರಡಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next