Advertisement

ಜು.13 ರಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ

03:28 PM Jul 11, 2020 | sudhir |

ಕುಂದಾಪುರ: ಕೋವಿಡ್ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವುದರಿಂದ ವರ್ತಕರು ಹಾಗೂ ಸಾರ್ವಜನಿಕರ ಹಿತ ರಕ್ಷಣೆಯ ಸಲುವಾಗಿ ಜು.13 ರಿಂದ ಜು.31 ವರೆಗೆ ಕುಂದಾಪುರ ಪುರಸಭಾ ವ್ಯಾಪ್ತಿಯ ಮೆಡಿಕಲ್‌, ಹಾಲು, ಹೋಟೆಲ್‌ ಹೊರತುಪಡಿಸಿ ಎಲ್ಲ ಅಂಗಡಿಗಳು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಲಿದ್ದು, ಆ ಬಳಿಕ ಸ್ವಯಂ ಪ್ರೇರಿತ ಬಂದ್‌ ಮಾಡಲಾಗುವುದು ಎಂದು ಕುಂದಾಪುರದ ಸಮಾನ ಮನಸ್ಕ ವರ್ತಕರು ತಿಳಿಸಿದ್ದಾರೆ.

Advertisement

ಶನಿವಾರ ಕುಂದಾಪುರದ ಶೆರೋನ್‌ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಪಾರಸ್ಥರಾದ ರಾಧಾಕೃಷ್ಣ ಅವರು ಕೊರೊನಾ ಸಮುದಾಯಿಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಪುರಸಭೆ ವ್ಯಾಪ್ತಿಯ ಸುಮಾರು 150 ಹೆಚ್ಚು ಮಂದಿ ಸಮಾನ ಮನಸ್ಕ ವ್ಯಾಪಾರಸ್ಥರು ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದಕ್ಕೂ ಮೊದಲು ಎಲ್ಲ ಅಂಗಡಿಗಳಿಗೂ ಭೇಟಿ ಕೊಟ್ಟು ಮನವಿ ಮಾಡಿದ್ದೇವೆ. ಸ್ವಯಂ ಪ್ರೇರಿತ ಬಂದ್‌ಗೆ ಎಲ್ಲರ ಬೆಂಬಲ ಸಿಕ್ಕಿದೆ ಎಂದವರು ಹೇಳಿದರು.

ಎಲ್ಲ ವರ್ತಕರಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದು, ಗ್ರಾಹಕರು ಕೂಡ ಸಹಕರಿಸಬೇಕು. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ, ಜಿಲ್ಲಾಡಳಿತದೊಂದಿಗೆ ನಮ್ಮ ಹೊಣೆಗಾರಿಕೆಯೂ ಇದೆ. ಸ್ವಯಂ ಪ್ರೇರಿತ ಬಂದ ಕುರಿತಂತೆ ಸಹಾಯಕ ಆಯುಕ್ತರು ಹಾಗೂ ಪೊಲೀಸ್‌ ಇಲಾಖೆಗೂ ಮನವಿ ಸಲ್ಲಿಸಲಾಗುವುದು ಎನ್ನುವುದಾಗಿ ಶ್ರೀಧರ್‌ ಪಿ.ಎಸ್‌. ಹೇಳಿದರು.

ಈ ಸಂದರ್ಭದಲ್ಲಿ ಜುವೆಲ್ಲರ್ ಅಸೋಸಿಯೇಶನ್‌ ಅಧ್ಯಕ್ಷ ಸತೀಶ್‌ ಶೇಟ್‌, ವರ್ತಕರಾದ ವಿಜಯ ಕುಮಾರ್‌ ಶೆಟ್ಟಿ, ಹುಸೇನ್‌ ಹೈಕಾಡಿ, ಅಬು ಮಹಮ್ಮದ್‌, ತಬ್ರೈಜ್‌, ಸಂತೋಷ್‌, ಸತೀಶ್‌ ಹೆಗ್ಡೆ, ಜಸ್ವಂತ್‌ ಸಿಂಗ್‌, ಸುರೇಂದ್ರ ಶೇಟ್‌, ಮತ್ತಿತರರು ಉಪಸ್ಥಿತರಿದ್ದರು.

ಏನಿದೆ ? ಏನಿಲ್ಲ?
ಎಲ್ಲ ದಿನಸಿ, ತರಕಾರಿ, ಹಣ್ಣು, ಎಲೆಕ್ಟ್ರಿಕಲ್ ಶೋ ರೂಂ, ಮೊಬೈಲ್‌, ಬಟ್ಟೆ, ಬೇಕರಿ, ಜೂಸ್‌ ಪಾರ್ಲರ್‌, ಸೆಲೂನ್‌, ಬೂಟಿ ಪಾರ್ಲರ್‌ಗಳು, ಚಿನ್ನದ ಮಳಿಗೆಗಳು ಸೇರಿದಂತೆ ಎಲ್ಲ ಅಂಗಡಿಗಳು ಜುಲೈ ಅಂತ್ಯದವರೆಗೆ ಮಧ್ಯಾಹ್ನ 2 ಗಂಟೆಯವರೆಗೆ  ತೆರೆಯಲಿದ್ದು, ಮಧ್ಯಾಹ್ನದ ನಂತರ ವಹಿವಾಟು ಬಂದ್ ಆಗಲಿದೆ.

Advertisement

ತುರ್ತು ಅಗತ್ಯತೆಯಾದ ಮೆಡಿಕಲ್‌, ಅಧಿಕೃತ ಹಾಲು ಮಾರಾಟ ಅಂಗಡಿ, ಎಲ್ಲ ಹೋಟೆಲ್‌ಗ‌ಳು ಎಂದಿನಂತೆ ತೆರೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next