Advertisement
ಪತಿ ವಿಶ್ವನಾಥ ಅವರು ಬೆಳಗ್ಗೆ 8 ಗಂಟೆಗೆ ಮನೆಯಿಂದ ಮೊಳಹಳ್ಳಿಗೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನಗಿರುವ ಆರೋಗ್ಯ ಸಮಸ್ಯೆಯಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಅವರ ಸಹೋದರ ಕುಶಲ ಹಳ್ನಾಡು ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಆನಗಳ್ಳಿಯ ಸೇತುವೆ ಬಳಿ ವಾರಾಹಿ ಹೊಳೆಗೆ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಿದ್ದ ಸಹದೇವ (69) ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನ. 13ರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಸಂಭವಿಸಿದೆ. ಅಳಿಯ ಉದಯ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.