Advertisement
ರೈಡರ್ ರೋಹಿದಾಸ್ (45) ನಾಪತ್ತೆಯಾಗಿದ್ದು, ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಿ ಕರೆತರಲಾಗಿದೆ. ರೈಡ್ ಮಾಡುತ್ತಿದ್ದ ರೋಹಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.
Advertisement
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
10:34 PM Dec 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.