ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆಯು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಗುರುವಾರ ಪೂರ್ಣಗೊಂಡಿದ್ದು, ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಜೂ. 7ಕ್ಕೆ ಆದೇಶವನ್ನು ಕಾಯ್ದಿರಿಸಿದ್ದಾರೆ.
ಗಣೇಶ್ ಶೆಟ್ಟಿ ಪರ ಕುಂದಾಪುರದ ವಕೀಲರಾದ ಕೆ.ಸಿ. ಶೆಟ್ಟಿ, ಟಿ.ಬಿ. ಶೆಟ್ಟಿ ಹಾಗೂ ದಿನೇಶ್ ವಕಾಲತ್ತು ವಹಿಸಿದ್ದು, ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೂ. 1 ಹಾಗೂ ಜೂ. 2 ರಂದು ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಅವರು ಆಕ್ಷೇಪಣೆ ಸಲ್ಲಿಸಿದ್ದು, ಈಗ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ವಿಚಾರಣೆ ಪೂರ್ಣಗೊಂಡಿದೆ.
ವೆನ್ಲಾಕ್‌ಗೆ ದಾಖಲು:
ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಗಣೇಶ್ ಶೆಟ್ಟರನ್ನು ಶನಿವಾರ ಉಡುಪಿ ಅಜ್ಜರಕಾಡಿನ ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಸಲುವಾಗಿ ಈಗ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.