ಕುಂದಾಪುರ : ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಮತ್ತೋರ್ವ ಆರೋಪಿ, ಬ್ರೋಕರ್ ಎಚ್. ಇಸ್ಮಾಯಿಲ್ ಪತ್ತೆಗಾಗಿ ಕುಂದಾಪುರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಗೋಪಾಲಕೃಷ್ಣ ಅವರು ಮೇ 26ರ ಬೆಳಗ್ಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಮನೆಯ ಸಿಟೌಟ್‌ನಲ್ಲಿ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಕ್ಷಣದಿಂದ ಇಸ್ಮಾಯಿಲ್ ನಾಪತ್ತೆಯಾಗಿದ್ದಾನೆ. ಹೊರಜಿಲ್ಲೆಗೆ ಪರಾರಿಯಾದ ಶಂಕೆಯಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಡೆತ್‌ನೋಟ್‌ನಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ್ದಂತೆ ಮೊಳಹಳ್ಳಿ ಗಣೇಶ್ ಶೆಟ್ಟಿ ಹಾಗೂ ಎಚ್. ಇಸ್ಮಾಯಿಲ್ ಹೆಸರು ಉಲ್ಲೇಖೀಸಿದ್ದು, ಅದರಂತೆ ಗಣೇಶ್ ಶೆಟ್ಟಿಯನ್ನು ಶುಕ್ರವಾರ ಬಂಧಿಸಲಾಗಿತ್ತು.
ಇದನ್ನೂ ಓದಿ : ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್