Advertisement

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

08:17 PM Jan 02, 2025 | Team Udayavani |

ಕುಂದಾಪುರ: ವಿಪರೀತ ಮದ್ಯ ಸೇವನೆಯ ಚಟ ಹೊಂದಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಿಲ್ಲಾಡಿ ಗ್ರಾಮದ ಶೇಖರ (54) ಅವರು ಇಲ್ಲಿನ ಶಾಸ್ತ್ರೀ ಸರ್ಕಲ್‌ನ ಬಸ್‌ ನಿಲ್ದಾಣ ಬಳಿ ಮಲಗಿದಲ್ಲಿಯೇ ಸಾವನ್ನಪ್ಪಿದ ಘಟನೆ ಜ. 2ರಂದು ಬೆಳಕಿಗೆ ಬಂದಿದೆ.

Advertisement

ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಶೇಖರ ಅವರು ಕಿಡ್ನಿ ಸಮಸ್ಯೆಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮದ್ಯ ಸೇವನೆಯ ಚಟ ಹೊಂದಿದ್ದ ಅವರು ಸರಿಯಾಗಿ ಆಹಾರ ಸೇವನೆ ಮಾಡದೆಯೂ ಇರುತ್ತಿದ್ದರು. ಅದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂದು ಪುತ್ರ ರಿತೇಶ್‌ (19) ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next