Advertisement

ಯಡಮೊಗೆ ಕೊಲೆ‌ ಪ್ರಕರಣ: ಆರೋಪಿ ಗ್ರಾ.ಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಪೊಲೀಸರ ವಶಕ್ಕೆ

09:10 AM Jun 06, 2021 | Team Udayavani |

ಕುಂದಾಪುರ: ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಉಳ್ಳೂರು -74 ಗ್ರಾ. ಪಂ ಸದಸ್ಯರೊಬ್ಬರ  ಮನೆಯಲ್ಲಿ ಪ್ರಾಣೇಶ್ ಯಡಿಯಾಳ್ ನನ್ನು ತಡರಾತ್ರಿ 3 ಗಂಟೆಯ ಸಮಯದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಶಂಕರನಾರಾಯಣ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಕೊಲೆ‌ ಪ್ರಕರಣವೊಂದು ವರದಿಯಾಗಿತ್ತು. ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿಯಾಗಿದ್ದರು.

ಘಟನೆ ಹೇಗಾಯಿತು?

Advertisement

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್‌ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಉದಯ ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ ಪ್ರಶ್ನಿಸುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್‌ ಹಾಗೂ ಉದಯ ಮಧ್ಯೆ ವೈಯಕ್ತಿಕ ದ್ವೇಷ ಮೂಡಿತ್ತು ಎನ್ನಲಾಗಿದೆ. ಉದಯ್‌ ವಿವಾಹಿತರಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಸಗೊಬ್ಬರ ಅಂಗಡಿಯನ್ನು ನಡೆಸುತ್ತಿದ್ದ ಅವರು ಕೃಷಿಕರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next