Advertisement

ಕಾರು –ಬೈಕ್ ಡಿಕ್ಕಿ: ಖಾಸಗಿ ಕಂಪನಿಯ ವ್ಯವಸ್ಥಾಪಕ ಸ್ಥಳದಲ್ಲೇ ಸಾವು

09:53 AM Jun 14, 2022 | Team Udayavani |

ಕುಣಿಗಲ್: ಕಾರು- ಬೈಕ್ ನಡುವೆ ಅಪಘಾತ ಸಂಭವಿಸಿ ಖಾಸಗಿ ಕಂಪನಿಯ ವ್ಯವಸ್ಥಾಪಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33ರ ಟಿ.ಎಂ ರಸ್ತೆ ಗವಿಮಠ ಬಳಿ ನಡೆದಿದೆ.

Advertisement

ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಹಳೇವೂರು ಗ್ರಾಮದ ನಿವಾಸಿ ಮಹದೇವ್ (29) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃತ ಮಹದೇವ್ ಸೊಲೂರಿನ ಖಾಸಗಿ ಕಂಪನಿಯೊಂದರಲ್ಲಿ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಕೆಲಸ ಮುಗಿಸಿ ತನ್ನ ಸ್ವಗ್ರಾಮ ಹಳೇವೂರಿಗೆ ತೆರಳುವ ವೇಳೆ ಮದ್ದೂರು ಕಡೆಯಿಂದ ಕುಣಿಗಲ್ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹದೇವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next