ಕುಣಿಗಲ್ : ಅಕ್ರಮವಾಗಿ ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿದ ಹುಲಿಯೂರುದುರ್ಗ ಪೊಲೀಸರು, ಆರೋಪಿಯನ್ನ ಬಂಧಿಸಿ 20 ಕೆ.ಜಿ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕೆಂಚನಹಳ್ಳಿ ಗ್ರಾಮದ ಚನ್ನಯ್ಯ( 58) ಬಂಧಿತ ರೈತ.
ತನ್ನ ಸ್ವಂತ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರು ದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ 1.50 ಲಕ್ಷ ರೂ ಮೌಲ್ಯದ 20 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದ, ಆರೋಪಿಯನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಪೇದೆಗಳಾದ ನರಸಿಂಹಮೂರ್ತಿ, ಸತೀಶ್, ರಜಿನಿಕಾಂತ್ ನಂಜುಂಡಿ, ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.