Advertisement

ಬಡ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಿದ ಕುಣಿಗಲ್‌ ಶಾಸಕ ರಂಗನಾಥ್‌

10:25 PM Jul 27, 2023 | Team Udayavani |

ಕುಣಿಗಲ್‌: ತೀವ್ರ ಕೀಲು ನೋವಿನಿಂದ ಬಳಲುತ್ತಿದ್ದ ಬಡ ಮಹಿಳೆಗೆ ತಿಂಗಳ ಹಿಂದೆಯಷ್ಟೇ ಶಸ್ತ್ರಚಿಕಿತ್ಸೆ ಮಾಡಿ ಗಮನ ಸೆಳೆದಿದ್ದ ಕುಣಿಗಲ್‌ ಶಾಸಕ ಡಾ.ಎಚ್‌.ಡಿ.ರಂಗನಾಥ್‌ ಅವರು ಈಗ ಮಂಡಿ ನೋವಿನ ಸಮಸ್ಯೆ ಹೊಂದಿದ್ದ ಮತ್ತೂಬ್ಬರಿಗೆ ಸ್ವತಃ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

Advertisement

ಮಂಡಿನೋವಿನಿಂದ ಬಳಲುತ್ತಿದ್ದ ಕುಣಿಗಲ್‌ ತಾಲೂಕಿನ ಅಮೃತೂರು ಹೋಬಳಿ ಯಡವಾಣಿ ಗ್ರಾಮದ ಶಿವನಂಜಯ್ಯ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆರ್ಥಿಕ ಕಷ್ಟವಿತ್ತು. ಇದರ ಬಗ್ಗೆ ಅವರು ಶಾಸಕರಿಗೆ ತಿಳಿಸಿ ಚಿಕಿತ್ಸೆಗೆ ನೆರವಾಗುವಂತೆ ಕೋರಿದ್ದರು. ಅದಕ್ಕೆ ಸ್ಪಂದಿಸಿದ ಡಾ| ರಂಗನಾಥ್‌ ಅವರು ಸ್ವತಃ ಶಸ್ತ್ರಚಿಕಿತ್ಸೆ ಮಾಡಿ ಸಹಾಯ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next