Advertisement

ಕುಣಿಗಲ್: ಮನೆ ಬಿಟ್ಟು ಹೊಗದ ಅತ್ತೆಗೆ ಸೊಸೆಯಿಂದ ಮಾರಣಾಂತಿಕ ಹಲ್ಲೆ

10:13 PM Nov 04, 2022 | Team Udayavani |

ಕುಣಿಗಲ್ : ಮನೆ ಬಿಟ್ಟು ಹೊಗದ ಅತ್ತೆಯ ಮೇಲೆ ಸೊಸೆ ಕಬ್ಬಿಣ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಕೆಆರ್‌ಎಸ್ ಆಗ್ರಹಾರದಲ್ಲಿ ಶುಕ್ರವಾರ ನಡೆದಿದೆ.

Advertisement

ಮೂಲತಃ ಅಮೃತೂರು ಹೋಬಳಿ, ಗಜನಪಾಳ್ಯ ಗ್ರಾಮದ ವಾಸಿ ಹಾಲಿ ಕುಣಿಗಲ್ ಪಟ್ಟಣದ ಕೆಆರ್‌ಎಸ್ ಆಗ್ರಹಾರದ ಚಿಕ್ಕತಾಯಮ್ಮ (65) ಸೋಸೆ ಸೌಮ್ಯಳಿಂದ ಹಲ್ಲೆಗೆ ಒಳಗಾದ ವೃದ್ದೆ.

  ಘಟನೆ ವಿವರ
ಚಿಕ್ಕತಾಯಮ್ಮ ಅವರಿಗೆ ಶಿವಕುಮಾರ್ ಹಾಗೂ ಎನ್.ಶಂಕರ್ ಇಬ್ಬರು ಗಂಡು ಮಕ್ಕಳಿದ್ದು, ಶಿವಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದಾನೆ ಇನ್ನೊಬ್ಬ ಮಗ ಎನ್.ಶಂಕರ್ ಅವರೊಂದಿಗೆ ಚಿಕ್ಕತಾಯಮ್ಮ ಕೆ.ಆರ್.ಎಸ್ ಆಗ್ರಹಾರದ ರೇವಣ್ಣ ಎಂಬುವರ ಮನೆಯಲ್ಲಿ ಕಳೆದ ಒಂದು ವರೆ ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುತ್ತಾರೆ.

ಎನ್.ಶಂಕರ್ ಅವರು ಸೌಮ್ಯಳೊಂದಿಗೆ ಮದುವೆಯಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇರುತ್ತಾರೆ,  ಬೆಂಗಳೂರಿನಲ್ಲಿ ಇರುವ ಶಿವಕುಮಾರ್ ಅವರ ಮನೆಗೆ ಹೋಗು ಎಂದು ಸೋಸೆ ಸೌಮ್ಯಳು ತನ್ನ ಅತ್ತೆ ಚಿಕ್ಕತಾಯಮ್ಮನಿಗೆ ಒತ್ತಾಯ ಮಾಡುತ್ತಾ ಪದೇ, ಪದೇ ಮಾನಸಿಕ ಹಾಗೂ ದೈಹಿಕವಾಗಿ ಹಿಂದೆ ನೀಡುತ್ತಿದ್ದರು ಎನ್ನಲಾಗಿದ್ದು, ಈ ಸಂಬಂಧ ಹಲವು ಭಾರಿ ಸೌಮ್ಯಳಿಗೆ ಮನೆಯ ಅಕ್ಕಪಕ್ಕದವರು ಬುದ್ದಿವಾದ ಹೇಳಿದರು ಎನ್ನಲಾಗಿದ್ದು, ಹೀಗಿದ್ದರೂ ಶುಕ್ರವಾರ (ನ4) ಬೆಳಗ್ಗೆ ಚಿಕ್ಕತಾಯಮ್ಮ ಅವರ ಮನೆಯಲ್ಲಿ ಗಲಾಟೆ ನಡೆಯುತ್ತಿರುವ ಶಬ್ದ ಕೇಳಿ ಬಂದಿದೆ. ಅಷ್ಟರಲ್ಲಿ ಶಂಕರ್ ಅವರ ಮಕ್ಕಳಾದ ಗೌತಮಿ ಮತ್ತು ಸಹನಾ ಮನೆಯಿಂದ ಹೊರಗಡೆ ಬಂದು ನಮ್ಮ ಅಮ್ಮ ಅಜ್ಜಿಗೆ ಹೊಡೆಯುತ್ತಿದ್ದಾರೆ ಎಂದು ಅಳುತ್ತಿದ್ದರು.

ಮನೆಯ  ಪಕ್ಕದ ನಾಗೇಂದ್ರ ಹಾಗೂ ಹೆಚ್.ವಿ.ಲಕ್ಷ್ಮಣ್‌ಗೌಡ ಅವರು ಚಿಕ್ಕತಾಯಮ್ಮ ಅವರ ಮನೆ ಒಳಗೆ ಹೋಗಿ ನೋಡಿದಾಗ ಸೋಸೆ ಸೌಮ್ಯ ಅವರು ಕೈಯಲ್ಲಿ ಅತ್ತೆ ಜುಟ್ಟನ್ನು ಇಡಿದು ಎಳೆದಾಡುತ್ತಾ ಕಬ್ಬಿಣದ ಪೈಪ್‌ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರತರಹದ ಗಾಯ ಉಂಟು ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನಿನ್ನನು ಕೊಲೆ ಮಾಡಿಯೇ ತೀರುತ್ತೇನೆ ಎಂದು ಹೇಳಿದಿದ್ದಾರೆ ಎಂದು ದೂರು ದಾಖಲಾಗಿದೆ.

Advertisement

ಎಚ್.ವಿ.ಲಕ್ಷ್ಮಣ್‌ಗೌಡ ಹಾಗೂ ನಾಗೇಂದ್ರ ಅವರು ಸೌಮ್ಯ ಅವರ ಕೈಯಲ್ಲಿ ಇದ್ದ ಕಬ್ಬಿಣದ ಪೈಪ್ ಅನ್ನು ಕಿತ್ತುಕೊಂಡು ತೀವ್ರವಾಗಿ ಗಾಯಗೊಂಡಿದ ಅತ್ತೆ ಚಿಕ್ಕತಾಯಮ್ಮ ನನ್ನು ಅಂಬ್ಯೂಲೆನ್ಸ್ನಲ್ಲಿ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಚಿಕ್ಕತಾಯಮ್ಮನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದ್ದು ಈ ಸಂಬಂಧ ಹೆಚ್.ವಿ.ಲಕ್ಷ್ಮಣಗೌಡ ಕುಣಿಗಲ್ ಠಾಣೆಗೆ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next