Advertisement

ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ

12:53 PM Jul 29, 2022 | Team Udayavani |

ಕುಣಿಗಲ್: ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕೊಲೆ ಖಂಡಿಸಿ ವಿಶ್ವ ಹಿಂದು ಪರಿಷತ್ , ಬಜರಂಗದಳ ಕಾರ್ಯಕರ್ತರು ಪಟ್ಟಣದ ಹುಚ್ಚು ಮಾಸ್ತಿಗೌಡ ಸರ್ಕಲ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರ ಹತ್ಯೆ ಸಂಬಂಧ  ವಿಶೇಷ ತನಿಖಾ ತಂಡ ರಚಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಜರಂಗದಳದ ಅಧ್ಯಕ್ಷ ಗಿರೀಶ್, ತಾಲೂಕು ಬಾಜಾಪ ಪ್ರಧಾನ ಕಾರ್ಯದರ್ಶಿ ದೇವರಾಜ್, ಪುರಸಭಾ ಸದಸ್ಯ ಗೋಪಿ ಅರಸ್ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹಂತಕರ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ತಾಲೂಕು ಬಾಜಾಪ ಪ್ರಧಾನ ಕಾರ್ಯದರ್ಶಿ ದೇವರಾಜ್ ಮಾತನಾಡಿ  ರಾಜ್ಯದಲ್ಲಿ  ಹಿಂದು ಯುವ ಕಾರ್ಯಕರ್ತರನ್ನು ಗುರಿಯಾಗಿ ಇಟ್ಟುಕೊಂಡು ಕೊಲೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಅಮಾಯಕ ಪ್ರವೀಣ್ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆ ಗೈದಿದ್ದಾರೆ. ಹೀಗಾಗಲೇ ಕೆಲ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕೊಲೆ ಹಿಂದೆ ಮತಷ್ಟು ಆರೋಪಿಗಳು ಇರುವ ಕಾರಣ ವಿಶೇಷ ತಂಡ ರಚಿಸಿ ಕೊಲೆ ಪಾತಕರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹ ಪಡಿಸಿದರು. ದುಷ್ಟ ಅಂತಕರನ್ನು ಮಟ್ಟ ಹಾಕದಿದ್ದಲ್ಲಿ ಮತಷ್ಟು ಹಿಂದು ಕಾರ್ಯಕರ್ತರು ಕೊಲೆಯಾಗಲಿದ್ದಾರೆ. ಹಾಗಾಗಿ ಸರ್ಕಾರ ಇದಕ್ಕೆ ಆಸ್ಪದ ಕೊಡಬಾರದು ಎಂದು ಒತ್ತಾಯಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹಿಂದು ಕಾರ್ಯಕರ್ತರಾದ ಸುನೀಲ್ , ಕಾರ್ತಿಕ್, ನವೀನ್, ದೇವರಾಜ್ , ಮನು , ರವೀಶ್, ಶಿವು ಮತ್ತಿತರರು ಭಾಗವಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next