ಕುಣಿಗಲ್: ವಿಳಾಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಕಳ್ಳರು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಬಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಂಡಿಹಳ್ಳಿ ಗ್ರಾಮದ ಜಯಮ್ಮ ಸರ ಕಳೆದುಕೊಂಡ ಮಹಿಳೆ
ಜಯಮ್ಮ ಹೊಲದ ಹತ್ತಿರ ಹಸುವನ್ನು ಮೇಯಿಸಲು ಹೋಗಬೇಕಾದ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ನಿಂತಿರಬೇಕಾದರೆ, ಬಿಳಿ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವಿಳಾಸ ಕೇಳುವ ನೆಪದಲ್ಲಿ ಸುಮಾರು 30 ಗ್ರಾಂ ಚಿನ್ನದ ಸರವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.