Advertisement

KUPMA: ಖಾಸಗಿ ಪಿಯು ಕಾಲೇಜುಗಳ ಸಂಘಟನೆ ಬಲಪಡಿಸಿ: ಡಾ.ಎಂ.ಮೋಹನ ಆಳ್ವ

01:14 AM Sep 02, 2024 | Team Udayavani |

ಬೆಂಗಳೂರು: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ)ಕ್ಕೆ ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸುವ ಮೂಲಕ ಕಾರ್ಯಕಾರಣಿ ಸಮಿತಿಯನ್ನು ರಾಜ್ಯಾದ್ಯಂತ ಬಲಪಡಿಸಲು ಸಂಘದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಕರೆ ನೀಡಿದರು.

Advertisement

ರವಿವಾರ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ನಡೆದ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ 2023-24ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಕುಪ್ಮಾ ಕಾರ್ಯಕಾರಿಣಿ ಸಮಿತಿಯನ್ನು ರಾಜ್ಯಾದ್ಯಂತ ಬಲಪಡಿಸುವ ಬಗ್ಗೆ ಮತ್ತುಕುಪ್ಮಾಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸುವ ಬಗ್ಗೆ ನೂತನ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸಮಿತಿಯು ಕಾರ್ಯನಿರ್ವಹಿಸಲಿದೆ. ಅಂತೆಯೇ ಕುಪ್ಮಾದ ಸಮಸ್ಯೆಗಳನ್ನು ಸರಕಾರದೊಂದಿಗೆ ಆರೋಗ್ಯಪೂರ್ಣವಾಗಿ ಬಗೆಹರಿಸಿಕೊಳ್ಳುವ ಬಗ್ಗೆ ಸಮನ್ವಯತೆ ಕಾಯ್ದಕೊಂಡು ಸಮಿತಿಯ ಎಲ್ಲ ಸದಸ್ಯರು ಕುಪ್ಮಾವನ್ನು ಇನ್ನಷ್ಟು ಬಲಪಡಿಸುವಲ್ಲಿ ಕಾರ್ಯನಿರ್ವಹಿಸಬೇಕೆಂದು ಅವರು ಮನವಿ ಮಾಡಿದರು.

ಸಂಘದ ಕಾರ್ಯದರ್ಶಿ ಪ್ರೊ| ನರೇಂದ್ರ ಎಲ್‌. ನಾಯಕ್‌, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಕೀರ್ತನ್‌ ಕುಮಾರ್‌, ಬೆಂಗಳೂರು ಕುಪ್ಮಾ ಕಾರ್ಯದರ್ಶಿ ಡಾ| ಬಿ.ಕೆ.ದೇವರಾಜ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಕುಪ್ಮಾ ಅಧ್ಯಕ್ಷ ಡಾ| ಜಯರಾಮ್‌ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next