ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಸಂಘದ ಜ್ಞಾನ ಮಂದಿರದ ಜಂಟಿ ಆಯೋಜನೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ. 23ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಮತ್ತು ಬಂಟರ ಸಂಘದ ಮಾಜಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ್ ಭಂಡಾರಿ, ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ ಹಾಗೂ ಎರಡೂ ಸಮಿತಿಗಳ ನೇತೃತ್ವದಲ್ಲಿ ಜರಗಿದ ಈ ವಿಶೇಷ ಸಮಾರಂಭದಲ್ಲಿ ಜ್ಞಾನಮಂದಿರದ ವತಿಯಿಂದ ಇತ್ತೀಚೆಗೆ ಜರಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಸಂಘದ ಮುಖ್ಯವಾಣಿ ಬಂಟರವಾಣಿ ಇತ್ತೀಚೆಗೆ ಆಯೋಜಿಸಿದ ಲೇಖನ, ಕತೆ, ಕವನ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಆರು ಮಂದಿ ಬರಹಗಾರರನ್ನು ಗೌರವಿಸಲಾಯಿತು.
ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ, ಸಂಪಾದಕ ಪ್ರೇಮನಾಥ್ ಬಿ. ಶೆಟ್ಟಿ ಮುಂಡ್ಕೂರು, ಸಂಪಾದಕ ಮಂಡಳಿಯ ಡಾ| ಸುನೀತಾ ಎಂ. ಶೆಟ್ಟಿ, ತೀರ್ಪುಗಾರರಾದ ಕೋಡು ಭೋಜ ಶೆಟ್ಟಿ, ನಂದಳಿಕೆ ನಾರಾಯಣ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಬಹುಮಾನ ವಿತರಿಸಲಾಯಿತು. ಸಂಘದ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯ ಸದಸ್ಯರು ಹಾಗೂ ಸಂಘದ ಸದಸ್ಯರ ಒಗ್ಗೂಡುವಿಕೆಯಲ್ಲಿಖ್ಯಾತ ಪ್ರಸಂಗಕರ್ತ ಅನಂತ ರಾಮ ಬಂಗಾಡಿ ವಿರಚಿತ ಕಾಡ ಮಲ್ಲಿಗೆತುಳು ಯಕ್ಷಗಾನಪ್ರದರ್ಶನಗೊಂಡಿತು.ವಿಶೇಷ ಆಕರ್ಷಣೆ ಯಾಗಿ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ, ಖ್ಯಾತ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಭಾಗವತಿಕೆ ಯಲ್ಲಿ ಸಹಕರಿಸಿದರು. ಪ್ರದರ್ಶನ ಪೂರ್ವ ತಯಾರಿಗಾಗಿ ಯಕ್ಷಸಂಘಟಕ ಅಜೆಕಾರು ಬಾಲಕೃಷ್ಣ ಶೆಟ್ಟಿ, ಅರ್ಥದಾರಿ ವಾಸುದೇವ ಮಾರ್ನಾಡ್, ಯಕ್ಷ ಕಲಾವೇದಿಕೆಯ ಸಂಚಾಲಕ ಬಾಲಕೃಷ್ಣ ಹೆಗ್ಡೆ ಸಹಕರಿಸಿದರು. ಚಿತ್ರ-ವರದಿ:
ಪ್ರೇಮನಾಥ ಶೆಟ್ಟಿ ಮುಂಡ್ಕೂರು