Advertisement

ಜನರೊಂದಿಗೆ ಬೆರೆತು ಕಾರ್ಯನಿರ್ವಹಣೆ: ಜಿಲ್ಲಾಧಿಕಾರಿ ಕೂರ್ಮಾ ರಾವ್‌

01:02 AM Sep 02, 2021 | Team Udayavani |

ಉಡುಪಿ: ಜಿಲ್ಲೆಯ ವಿವಿಧೆಡೆ ಸಂಚರಿಸಿ ಜನರು ಮತ್ತು ಜನಪ್ರತಿನಿಧಿಗಳೊಡನೆ ಚರ್ಚಿಸಿ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

Advertisement

ಬುಧವಾರ ಅಧಿಕಾರ ಸ್ವೀಕರಿಸಿದ ಅವರು, ಮೊದಲು ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಅನಂತರ ಪರಿಹರಿಸುವ ಕ್ರಮಕ್ಕೆ ಮುಂದಾಗಬೇಕು. ಸದ್ಯದ ಸ್ಥಿತಿಯಲ್ಲಿ ಕೋವಿಡ್‌ 19 ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆಗೊಳಿಸಲು ಗಮನ ಹರಿಸುವೆ ಎಂದರು.

ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಟೆಕ್‌ ಪದವೀಧರರಾದ ರಾವ್‌ ಅವರು 2011ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು. ಮೂಲತಃ ಆಂಧ್ರ ಪ್ರದೇಶದವರಾದರೂ ಈಗ ಕರ್ನಾಟಕ ಶ್ರೇಣಿ ಅಧಿಕಾರಿಯಾಗಿ ಹತ್ತು ವರ್ಷಗಳಿಂದ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಉಡುಪಿಗೆ ಬರುವ ಮುನ್ನ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆಡಳಿತ ನಿರ್ದೇಶಕರಾಗಿದ್ದ ರಾವ್‌ ಅದಕ್ಕೂ ಹಿಂದೆ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದರು. ಪ್ರೊಬೆಷನರಿ ಅವಧಿ ಬಳಿಕ ಭಟ್ಕಳದಲ್ಲಿ ಸಹಾಯಕ ಕಮಿಷನರ್‌ ಆಗಿ ಸೇವೆ ಸಲ್ಲಿಸಿ ಕರಾವಳಿಯ ಅನುಭವವನ್ನೂ ಪಡೆದವರಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next