ಮೈಸೂರು: ಕುರುಬೂರು ಗ್ರಾಮದ ಬಳಿ ಇತ್ತೀಚೆಗೆ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮೈಸೂರು ಜಿಲ್ಲೆ ತಿ ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಇನ್ನೋವಾ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇನ್ನೋವಾದಲ್ಲಿದ್ದ ಬಳ್ಲಾರಿ ಮೂಲದ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಅಪಘಾತದಲ್ಲಿ ಶಶಿಕುಮಾರ್ ಎಂಬವರ ತಲೆಗೆ ಗಂಭೀರ ಗಾಯವಾಗಿತ್ತು. ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಶಿಕುಮಾರ್ ಶುಕ್ರವಾರ ಸಾವನ್ನಪ್ಪಿದ್ದಾರೆ.
ಉಳಿದ ಗಾಯಾಳುಗಳಿಗೆ ಚೆಲುವಾಂಬ ಹಾಗೂ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.