Advertisement

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

03:38 PM Mar 18, 2024 | Team Udayavani |

ಧಾರವಾಡ : ಬರಗಾಲದ ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು‌‌.

Advertisement

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಸಂಕಷ್ಟದಲ್ಲಿ ಬಳಲುತ್ತಿರುವ ರೈತರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಇಂತಹ ಸಮಯದಲ್ಲಿ ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ
ಛೀಮಾರಿ ಮೂಲಕ ಸ್ವಾಗತಿಸಬೇಕು ಎಂದರು.

ರಾಜ್ಯದಲ್ಲಿ ಬರಗಾಲ ಕಾಡುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರು ದನಗಳಿಗೆ ಮೇವು ಸಿಗುತ್ತಿಲ್ಲ, ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯಲು ದೊಂಬರಾಟ ಆಡುತ್ತಿವೆ. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿದ್ದಾರೆ. ರೈತರು ಸೊರಗುತ್ತಿದ್ದು, ಹಳ್ಳಿಗಳಿಗೆ ಮತ ಕೇಳಲು ಬರುವ ರಾಜಕೀಯ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ಮಾಡಿ ಸಮಸ್ಯೆ ಗಮನ ಸೆಳೆಯಬೇಕು ಎಂದರು.

ದೇಶದಲ್ಲಿ 70ರಷ್ಟು ಇರುವ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಲೆ ನಿಗದಿ ಮಾಡಿ ಎಂದರೆ ರೈತರ ಮೇಲೆ ಗೋಲಿಬಾರ್ ಮಾಡುತ್ತಾರೆ. ಆದರೆ ಶೇಕಡ 2 ರಷ್ಟು ಇರುವ ಸರ್ಕಾರಿ ನೌಕರರಿಗೆ 58 ರಷ್ಟು ಸಂಬಳ ಏರಿಕೆ ಮಾಡಭೇಕು ಎನ್ನುತ್ತ ವರದಿ ಸಲ್ಲಿಸುತ್ತಾರೆ, ಇಂತಹ ಪುರುಷಾರ್ಥಕ್ಕೆ ರೈತರು ಎಂಪಿಗಳನ್ನ ಗೆಲ್ಲಿಸಬೇಕೆ, ದೇಶದಲ್ಲಿ ಅನ್ನ ನೀಡುವ ರೈತನನ್ನು ಅನಾಥರಾಗಿ ಮಾಡಬಾರದು, ಅನ್ನದಾತರು ದೇಶಕ್ಕೆ ಆಶ್ರಯದಾತರು ಆಗಬೇಕು ಎಂದರು.

ವರ್ಷಾನುಕಾಲ ಹೋರಾಟ ಮಾಡಿದ ರೈತರ ಒತ್ತಾಯಕ್ಕೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಂಎಸ್ ಪಿ ಗ್ಯಾರಂಟಿ ಕಾನೂನು ಜಾರಿ ಮಾಡುತ್ತೇವೆ. ಸಾಲ ಮನ್ನಾ ಮಾಡುತ್ತೇವೆ ಎಂಬುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿದ್ದರೆ ದೇಶದ ರೈತರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

ಬರಗಾಲದ ಸಂಕಷ್ಟದಲ್ಲಿರುವ ಕಬ್ಬು ಸರಬರಾಜು ರೈತರಿಗೆ ಸಕ್ಕರೆ ಕಾರ್ಖಾನೆಗಳು ಮೂರು ತಿಂಗಳಿಂದ ಕಬ್ಬುಸರಬರಾಜು ಮಾಡಿದ ರೈತರಿಗೆ ಹಣ ಕೊಟ್ಟಿಲ್ಲ‌. ರಾಜಕೀಯ ಪಕ್ಷಗಳ ಶಾಸಕರು, ಮಂತ್ರಿಗಳೇ ಬಾಕಿ ಉಳಿಸಿಕೊಂಡಿದ್ದಾರೆ. ಇವರಿಗೆ ನಾಚಿಕೆ ಇಲ್ಲವೇ? ಒಂದು ವಾರದಲ್ಲಿ ಹಣ ನೀಡದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಗುಂಗಿನಲ್ಲಿ ತೇಲಾಡುತ್ತಿದೆ, ರೈತರು ಬಲಿ ಪಶುಗಳಾಗುತ್ತಿದ್ದಾರೆ.
ಜಿಲ್ಲಾಧಿಕಾರಿಗಳು ಚುನಾವಣೆ ಗುಂಗಿನಲ್ಲಿ ನಿರತರಾದರೆ ರೈತರ ಗತಿ ಏನು?ರೈತರ ಸಂಕಷ್ಟ ರಾಜಕೀಯ ಪಕ್ಷಗಳಿಗೆ ಆರಿವಾದರೆ, ರೈತರಿಗೆ ನ್ಯಾಯ ಸಿಗಲು ಸಾಧ್ಯ ಅದಕ್ಕಾಗಿ ಹಳ್ಳಿಗಳಲ್ಲಿ ಚಿಮಾರಿ ಸ್ವಾಗತ ನೀಡಿರಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ವೀರನಗೌಡ ಪಾಟೀಲ್, ಉಪಾಧ್ಯಕ್ಷ ಎಂ.ವಿ.ಗಾಡಿ, ಎನ್‌.ಹೆಚ್. ದೇವಕುಮಾರ್ ಹತ್ತಳ್ಳಿ, ದೇವರಾಜ್ ಉಳುವಪ್ಪ ಬಳಗೇರಾ, ಪರಶುರಾಮ್ ಎತ್ತಿನಗುಡ್ಡ, ನಿಜಗುಣ ಕೆಲಗೇರಿ, ಮಹೇಶ್ ಬೆಳಗಾಂಕರ್, ವಾಸು ದಾಖಪ್ಪನವರ್ , ಗುರುಸಿದ್ದಪ್ಪ ಕೋಟಗಿ, ನಾಗೇಂದ್ರ ಜಿವೂಜಿ, ರವಿಕುಮಾರ್. ಎಸ್ ಬಿ ಸಿದ್ದನಾಳ್ , ಶಂಕರ್ ಕಾಜಗಾರ್, ಬರಡನಪುರ ನಾಗರಾಜ್, ಮಾಳಪ್ಪ ಹೊನ್ನಳ್ಳಿ. ಮಲ್ಲೇಶಿ ಇದ್ದರು.

ಇದನ್ನೂ ಓದಿ: Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ

Advertisement

Udayavani is now on Telegram. Click here to join our channel and stay updated with the latest news.

Next