ಕುರುಗೋಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯ ಬದಿಯಲ್ಲಿ ನಿಂತಿದ್ದ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಭಟ್ರಳ್ಳಿ ಗ್ರಾಮದ ಬಳಿ ಶನಿವಾರ ನಡೆದಿದೆ.
ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದ ಕೆ.ಎಚ್. ಹರ್ಷವರ್ಧನ (22) ಮೃತರು. ಅವರ ಜತೆಯಲ್ಲಿ ನಿಂತಿದ್ದ ವಸಂತರಾಜ ಮತ್ತು ರವಿಚಂದ್ರ ಎಂಬ ಇಬ್ಬರಿಗೆ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೂರು ಗ್ರಾಮದಿಂದ ಬಳ್ಳಾರಿಗೆ ತೆರಳುವ ಸಂದರ್ಭದಲ್ಲಿ ಬೈಕ್ ಕೆಟ್ಟುನಿಂತ ಪರಿಣಾಮ ಮೂವರು ರಸ್ತೆಬದಿಯಲ್ಲಿ ನಿಂತಿದ್ದರು. ಸಿರುಗುಪ್ಪ ಕಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಅಪರಾಧ ವಿಭಾಗದ ಪಿಎಸ್‌ಐ ಲೋಕರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
ಇದನ್ನೂ ಓದಿ: ಚಿರತೆ ಮನೆಯೊಳಗೆ.. ಮನೆಮಂದಿ ಮನೆ ಹೊರಗೆ: ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ