ಸಾರ್ವಜನಿಕರಲ್ಲಿ ಮನವಿ ಮಾಡಿದರು.
Advertisement
ಪಟ್ಟಣದ ಮುಖ್ಯ ವೃತ್ತದಲ್ಲಿ ಮಾಸ್ಕ್ ಇಲ್ಲದ ಬೈಕ್ ಸವಾರರಿಗೆ ದಂಡವಿಧಿಸಿ ಜಾಗೃತಿ ಮೂಡಿಸಿದರು. ಸಾರ್ವಜನಿಕರು ನಿತ್ಯ ದಿನಸಿ ಅಂಗಡಿಗಳಿಗೆ ಹಾಗೂ ತರಕಾರಿ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಖರೀದಿಸುವ ವೇಳೆ ಕಡ್ಡಾಯವಾಗಿ ಮಾಸ್ಕ್ ಅನ್ನು ಉಪಯೋಗಿಸಬೇಕು. ಇಲ್ಲದಿದ್ದರೆ ಪುರಸಭೆ ವತಿಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಜೊತೆಗೆ ರಸ್ತೆಯಲ್ಲಿ ಮತ್ತು ಅಂಗಡಿ-ಮುಂಗಟ್ಟುಗಳಲ್ಲಿ ವ್ಯವಹಾರ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನುಡಿದರು. ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಕೆಮ್ಮು, ನೆಗಡಿ, ಶೀನು ಬಂದಾಗ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆಯಿರಿ ಎಂದು ಸಲಹೆ ನೀಡಿದರು.