Advertisement

ಸ್ವಯಂ ಪ್ರೇರಣೆಯಿಂದ ನೋಂದಣಿ ಕಚೇರಿ ಸೀಲ್‌ಡೌನ್‌

05:58 PM Jul 01, 2020 | Naveen |

ಕುರುಗೋಡು: ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಅದರಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮಂಗಳವಾರ ಬೆಳಗ್ಗೆ 44 ಗಂಟೆಗಳ ಕಾಲ ಸ್ವಯಂ ಪ್ರೇರಿತವಾಗಿ ಸೀಲ್‌ಡೌನ್‌ ಮಾಡಿ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್‌ ಅಳವಡಿಸಿದ್ದಾರೆ.

Advertisement

ಬಳ್ಳಾರಿ ನಿವಾಸದ ವ್ಯಕ್ತಿಯು ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಕಂಪ್ಯೂಟರ್‌ ರಿಪೇರಿ ಮಾಡಲು ಬಂದು ಹೋಗಿದ್ದು, ಆ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸ್ವಯಂ ಪ್ರೇರಿತದಿಂದ 44 ಗಂಟೆಗಳ ಕಾಲ ಸೀಲ್‌ಡೌನ್‌ ಮಾಡಿದ್ದಾರೆ. ಇನ್ನು ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಸ್ಯಾನಿಟೈಸರ್‌ ಸಿಂಪಡಣೆ ಮಾಡಿದ್ದಾರೆ.

ಕಚೇರಿ ಸೀಲ್‌ಡೌನ್‌ ಮಾಡಿರುವ ಹಿನ್ನೆಲೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೆ ಕಚೇರಿ ಹೊರಗಡೆ ಇದ್ದು ಮರಳಿದ್ದಾರೆ. ಪಟ್ಟಣದ 7ನೇ ವಾರ್ಡಿನಲ್ಲಿ ಕೋವಿಡ್ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆ ಕಚೇರಿ ಸೀಲ್‌ಡೌನ್‌ ಅಗಿದ್ದು, ಪಟ್ಟಣದ ಸಾರ್ವಜನಿಕರಲ್ಲಿ ಆತಂಕದ ಮನೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next