ಕುರುಗೋಡು: ಜೀವನದಿ ತುಂಗಾಭದ್ರಾ ನದಿ ಸಂಪೂರ್ಣ ಬತ್ತಿರುವುದರಿಂದ ನದಿ ದಂಡೆಯ ರೈತರು ಮುಂಗಾರು ಬೆಳೆಗೆ ಅವಕಾಶ ಇಲ್ಲದಂತಾಗಿದೆ.
Advertisement
ಮುಂಗಾರು ಬೆಳೆಗೆ ಹಾಕಿದ ಸಸಿ ಮಡಿಗಳು ಜಾನುವಾರುಗಳ ಪಾಲಾಗಿವೆ. ಇನ್ನೊಂದು ಕಡೆ ಜನ-ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರು ನೀರಿಗಾಗಿ ಖಾಸಗಿ ಘಟಕಗಳಿಗೆ ಮೊರೆ ಹೋಗುವಂತಾಗಿದೆ. ಈಗಾಗಲೇ ನದಿಗೆ ನೀರು ಬರುತ್ತೆ ಎಂಬ ಆಶಾಭಾವ ಹೊಂದಿದ್ದ ರೈತರು ಸಸಿ ಮಡಿ ಹಾಕಿದ್ದರು. ಆದರೆ ನೀರು ಇಲ್ಲದೇ ಒಣಗಿ ಜಾನುವಾರು ಪಾಲಾಗಿವೆ.
ಜಲಚರಗಳ ಸಾವು..
ನದಿಯಲ್ಲಿ ನೀರು ಇಲ್ಲದ ಪರಿಣಾಮ ಜಲಚರಗಳು ಸತ್ತು ನದಿ ದಂಡೆಯಲ್ಲಿ ಬಿದ್ದಿದ್ದು, ಪ್ರಾಣಿ-ಪಕ್ಷಿಗಳು ಆಹಾರ ಆಗುತ್ತಿವೆ. ಸತ್ತ ಮೀನುಗಳ ದುರ್ವಾಸನೆಯಿಂದ ನದಿ ದಡಕ್ಕೆ ತೆರಳುವ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನದಿಯಲ್ಲಿ ನೀರು ಇಲ್ಲದ ಪರಿಣಾಮ ಜಲಚರಗಳು ಸತ್ತು ನದಿ ದಂಡೆಯಲ್ಲಿ ಬಿದ್ದಿದ್ದು, ಪ್ರಾಣಿ-ಪಕ್ಷಿಗಳು ಆಹಾರ ಆಗುತ್ತಿವೆ. ಸತ್ತ ಮೀನುಗಳ ದುರ್ವಾಸನೆಯಿಂದ ನದಿ ದಡಕ್ಕೆ ತೆರಳುವ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಕಂಗಾಲಾದ ಮಿನುಗಾರರು
ಮೀನುಗಾರಿಕೆ ನಂಬಿ ಜೀವನ ಸಾಗಿಸುವ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿವೆ. ಸದ್ಯ ನದಿಯಲ್ಲಿ ನೀರು ಇಲ್ಲದೆ ಸುಮಾರು 2 ರಿಂದ 3 ತಿಂಗಳಾದರೂ ಮೀನುಗಾರರ ಬಲೆ ಮತ್ತು ದೋಣಿಗಳು ನದಿ ದಡವನ್ನು ಕಾಯುತ್ತಿವೆ.
ಮೀನುಗಾರಿಕೆ ನಂಬಿ ಜೀವನ ಸಾಗಿಸುವ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿವೆ. ಸದ್ಯ ನದಿಯಲ್ಲಿ ನೀರು ಇಲ್ಲದೆ ಸುಮಾರು 2 ರಿಂದ 3 ತಿಂಗಳಾದರೂ ಮೀನುಗಾರರ ಬಲೆ ಮತ್ತು ದೋಣಿಗಳು ನದಿ ದಡವನ್ನು ಕಾಯುತ್ತಿವೆ.
Related Articles
•ಹುಲೇಪ್ಪ, ಶರಣಪ್ಪ,
ಮೀನುಗಾರರು
Advertisement
ಕಳೆದ ವರ್ಷ ಈ ಸಮಯದಲ್ಲಿ ಭತ್ತ ನಾಟಿ ಮಾಡಿ ಉತ್ತಮ ಬೆಳೆ ಕಂಡುಕೊಂಡಿದ್ದೇವು. ಸದ್ಯದ ಪರಿಸ್ಥಿತಿ ತುಂಬಾ ಕಷ್ಟಕರವಾಗಿದೆ. ಅಲ್ಲಲ್ಲಿ ಕೆಲ ರೈತರು ಬೋರ್‌ವೆಲ್ ನೀರು ಬಳಸಿ ಬೆಳೆ ನಾಟಿ ಮಾಡಿದ್ದಾರೆ. ಇನ್ನೂ ಕೆಲವರು ಹಾಕಿದ್ದ ಸಸಿ ಮಡಿ ಜಾನುವಾರು ಪಾಲಾಗಿವೆ. ಹೀಗಾಗಿ ಹಲವಾರು ಕುಟುಂಬಗಳು ಜೀವನ ಸಾಗಿಸಲು ಗುಳೆ ಹೋಗುತ್ತಿದ್ದಾರೆ.•ಈರಣ್ಣ, ಫಕ್ಕಿರಪ್ಪ,
ನದಿ ದಂಡೆಯ ರೈತರು