Advertisement

ಯೂ ಟ್ಯೂಬ್ ನಲ್ಲಿ ಮತ್ತೆ “ಕುರುಕ್ಷೇತ್ರ’ಟೀಸರ್ ಟ್ರೆಂಡ್!

02:46 PM Jan 06, 2018 | |

ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರವು ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಎರಡು ಟೀಸರ್ ಗಳು ಬಿಡುಗಡೆಯಾಗಿದ್ದು, ಅಭಿಮನ್ಯುವನ್ನು ಪರಿಚಯಿಸುವಂತಹ ಟೀಸರ್ ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳ ಮಹಾಪೂರವೇ ಹರಿದು ಬಂದಿದೆ.

Advertisement

ಅಲ್ಲದೇ ಯೂ ಟ್ಯೂಬ್ ನಲ್ಲಿ ಟ್ರೈಲರ್ ನ್ನು 30 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು ಈಗ ದೊಡ್ಡ ಹಿಟ್ ಆಗಿದೆ. ಇನ್ನು ಅಭಿಮನ್ಯು ಪಾತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚಕ್ರವ್ಯೂಹ ಭೇದಿಸಿದ್ದಾರೆ. ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ.

ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕುರುಕ್ಷೇತ್ರ’ದಲ್ಲಿ ದರ್ಶನ್ ದುರ್ಯೋಧನನಾಗಿ ಕಾಣಿಸಿಕೊಂಡಿದ್ರೆ, 

ನಿಖಿಲ್ ಕುಮಾರ್ ಅಭಿಮನ್ಯು ಪಾತ್ರದಲ್ಲಿ ಮಿಂಚಿದ್ದಾರೆ. ಮಿಕ್ಕಂತೆ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಸಾಯಿಕುಮಾರ್‌, ಶಶಿಕುಮಾರ್‌, ರವಿಶಂಕರ್‌, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ, ಲಕ್ಷ್ಮೀ, ಸ್ನೇಹ, ಹರಿಪ್ರಿಯಾ ಸೇರಿದಂತೆ ಹಲವರು ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next