Advertisement

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

10:23 AM Sep 21, 2024 | Team Udayavani |

ಕುಶಾಲನಗರ : ಕುಶಾಲನಗರ ಪಟ್ಟಣ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸೆ.25ರಂದು ನಿಗದಿಯಾಗಿದೆ. ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಹಶೀಲ್ದಾರ್‌ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಮುಖರು ಹಾಗೂ ಪುರಸಭೆಯ ಬಿಜೆಪಿ ಸದಸ್ಯರು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

Advertisement

ಕುಶಾಲನಗರ ಬಿಜೆಪಿ ಅಧ್ಯಕ್ಷ ಎಂ.ಎಂ.ಚರಣ್‌ ಮಾತನಾಡಿ ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. ತಹಶೀಲ್ದಾರರು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ನಡುವೆ ಮಡಿಕೇರಿಗೆ ತೆರಳುತ್ತಿದ್ದ ವಿಪಕ್ಷ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ತಹಶೀಲ್ದಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಆಯ್ಕೆ ಸಂದರ್ಭ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ. ಅನಗತ್ಯವಾಗಿ ಗೊಂದಲ ಮಾಡುವುದು ಬೇಡ. ತಾನು ಕೂಡ ಕಂದಾಯ ಇಲಾಖೆಯ ಹಾಗೂ ಗೃಹ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಅನಗತ್ಯವಾಗಿ ಕರ್ತವ್ಯ ಲೋಪಕ್ಕೆ ಸಿಲುಕಬೇಡಿ, ಚುನಾವಣೆ ವಿಚಾರದಲ್ಲಿ ಕೆಟ್ಟ ಪರಂಪರೆ ಅನಾಹುತಕ್ಕೆ ಅವಕಾಶ ಕಲ್ಪಿಸಬಾರದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಅಶೋಕ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next