Advertisement
ಜುಲೈ 27 ರಂದು (ಗುರುವಾರ) ಬೆಳಿಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚೀಂದ್ರ ಮತ್ತು ಆಯೋಗದ ಇತರ ಅಧಿಕಾರಿಗಳೊಂದಿಗೆ ಖುಷ್ಬೂ ಅವರು ಘಟನೆಯ ಕುರಿತಾಗಿ ಮಾಹಿತಿ ಪಡೆದುಕೊಳ್ಳಲು ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿದರು.
Related Articles
Advertisement
ಈ ಪ್ರಕರಣದ ಅನೇಕ ಸಂಗತಿಗಳ ತನಿಖೆ ಆಗಬೇಕಿದೆ. ಪೂರಕ ಸಾಕ್ಷಿಗಳನ್ನು ಸಂಗ್ರಹಿಸಬೇಕಿದೆ. ಈ ಘಟನೆಯನ್ನು ಇಟ್ಟುಕೊಂಡು ಅನೇಕ ಫೇಕ್ ವೀಡಿಯೋಗಳು ಹರಿದಾಡುತ್ತಿದ್ದು, ಅವು ಯಾವುದೂ ಸತ್ಯವಲ್ಲ ಎಂದಿದ್ದ ಅವರು, ಪೊಲೀಸರು ಈಗಾಗಲೇ ಮೂರು ಮೊಬೈಲ್‌ಗಳ ಡಾಟಾ ಸಂಗ್ರಹಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನು ಕಳುಹಿಸಬೇಕಾಗಿದೆ. ಅಲ್ಲಿ ಸಾಕ್ಷ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಹೇಳಿದರು.
ಈ ಪ್ರಕರಣದಲ್ಲಿ ಭಾಗಿಯಾದ ಮೂವರರನ್ನು ಅಮಾನತು ಮಾಡಲಾಗಿದೆ. ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆಯಲ್ಲ. ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ ಬದಲಾಗಿ ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ. ಯಾವುದೇ ರಾಜಕೀಯ ಒತ್ತಡವಿಲ್ಲದೆ ತನಿಖೆ ನಡೆಸುತ್ತೇವೆ ಎಂದು ಬುಧವಾರ ಹೇಳಿದ್ದರು.