Advertisement

Kushtagi; ಅಪ್ರಾಪ್ತೆಯ ಮೇಲೆ ಅತ್ಯಾಚಾರ ಯತ್ನ: ಯುವಕನ ಬಂಧನ

10:13 PM Oct 26, 2023 | Team Udayavani |

ಕುಷ್ಟಗಿ:ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಯುವಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಪ್ರಕರಣ ತಾಲೂಕಿನ ವಕ್ಕಂದುರ್ಗ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

Advertisement

ಈ‌ ಪ್ರಕರಣದ ಹಿನ್ನೆಲೆಯಲ್ಲಿ ಯುವಕ ಬಸವರಾಜ ಬಡಪ್ಪನವರ್ ನನ್ನು ಪೊಲೀಸರು ವಶಕ್ಕೆ ಪಡೆದು ಪೋಕ್ಸೋ ಕಾಯ್ದೆ ಅಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 17 ರ ಹರಯದ ಅಪ್ರಾಪ್ತೆಯೊಂದಿಗೆ ಪ್ರೀತಿಯ ಸಲುಗೆ ಬೆಳೆಸಿ, ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಪ್ರಕರಣ ಅಪ್ರಾಪ್ತೆಯ ಪಾಲಕರಿಗೆ ಗೊತ್ತಾಗುತ್ತಿದ್ದಂತೆ ಹನುಮಸಾಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next