Advertisement

Kushtagi: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು

01:38 PM Nov 25, 2023 | Team Udayavani |

ಕುಷ್ಟಗಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.

Advertisement

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಕುಷ್ಟಗಿ ಘಟಕದ ಮೆಕ್ಯಾನಿಕ್, 33 ವರ್ಷದ ಯುವಕ ಮಹಾದೇವ ವಿಶ್ವನಾಥ ಹಳ್ಳದ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ಸಮಯ ನೇಣು ಹಾಕಿಕೊಂಡಿದ್ದಾನೆ.

ಕುಷ್ಟಗಿ ಸರ್ಕಾರಿ ಅಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next