Advertisement

ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

03:34 PM Jul 04, 2020 | keerthan |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಮಾದಾಪೂರ ಗ್ರಾಮದಲ್ಲಿ ಅಂತರಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

Advertisement

ಆತ್ಮಹತ್ಯೆ ಗೆ ಶರಣಾದವರನ್ನು ಹುಲಿಗೆಮ್ಮ(18) ಹಾಗೂ ವಿರುಪಾಕ್ಷಗೌಡ (20) ಎಂದು ಗುರುತಿಸಲಾಗಿದೆ.

ಇವರಿಬ್ಬರು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಮದುವೆ ವಿಚಾರವಾಗಿ ಗೊತ್ತಾಗಿದೆ. ಮದುವೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೆ. ರಾಂಪೂರ ಗ್ರಾಮದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next