ಬೆಂಗಳೂರು: ರಾಜ್ಯದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎನ್ನುವ ಚರ್ಚೆಗಳು ಪಕ್ಷಗಳ ಪಡಸಾಲೆಯಲ್ಲಿ ಜೋರಾಗಿದೆ. ಈ ಮಧ್ಯೆ ದಿವಂಗತ ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹಲವು ದಿನಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೊಂಡಿದ್ದರು. ಇದೀಗ ಅಚ್ಚರಿಯ ಅಭ್ಯರ್ಥಿ ಕುಸುಮಾ ರವಿ ಅವರೇ ಎನ್ನಲಾಗಿದೆ.
ಕುಸುಮಾ ಹಿನ್ನಲೆಯೇನು?
ಜೆಡಿಎಸ್ ನ ಹನುಮಂತರಾಯಪ್ಪ ಅವರ ಪುತ್ರಿಯಾದ ಕುಸುಮಾ 1989ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದರು. ನಗರದಲ್ಲಿ ಪ್ರಾಥಮಿಕ ಮತ್ತು ಪಿಯುಸಿ ಶಿಕ್ಷಣ ಮುಗಿಸಿದ ಕುಸುಮಾ ಬೆಂಗಳೂರಿನ ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದರು.
2018ರಲ್ಲಿ ಯೂನಿವರ್ಸಿಟಿ ಆಫ್ ಮ್ಯಾಸಚುಸೆಟ್ಟ್ ಬೋಸ್ಟನ್ ವಿವಿಯಿಂದ ಎಂಎಸ್ ಸ್ನಾತಕೋತ್ತರ ಪದವಿ ಪಡೆದಿರುವ ಕುಸುಮಾ ಬೆಂಗಳೂರಿನಲ್ಲಿ ಒಂದು ವರ್ಷ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಐಎಎಸ್ ಅಧಿಕಾರಿಯಾಗಿದ್ದ ಡಿ ಕೆ ರವಿ ಅವರ ಜೊತೆ ಕುಸುಮಾ ವಿವಾಹವಾಗಿತ್ತು. ಆದರೆ 2015ರ ಮಾರ್ಚ್ 16ರಂದು ಡಿ ಕೆ ರವಿ ನಿಧನರಾಗಿದ್ದಾರೆ.
ಇದನ್ನೂ ಓದಿ:ಡಿ ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಸೇರ್ಪಡೆ: ಏನಿದು ಕಾಂಗ್ರೆಸ್ ಹೊಸ ಪ್ಲ್ಯಾನ್?