Advertisement

ಕುತ್ತಾರು: ಬೈಕ್ ಅಪಘಾತದಲ್ಲಿ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

05:45 PM Jan 08, 2023 | Team Udayavani |

ಉಳ್ಳಾಲ: ನಿನ್ನೆ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ.

Advertisement

ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಅಪಘಾತ ಸಂಭವಿಸಿದ್ದು, ಅಪಘಾತ ನಂತರ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.

ಮೃತ ಭೂಷಣ್ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನೆರವೇರಿತ್ತು. ತಂದೆ ಮಾರಪ್ಪ ರೈ ಅಸೌಖ್ಯದಿಂದ ಮೂರು ತಿಂಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮೃತ ಭೂಷಣ್ ತಾಯಿ ಜತೆಗೆ ನೆಲೆಸಿದ್ದರು.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆರು ನಿರ್ಣಯ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next