ಬೆಂಗಳೂರು: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ವತಿಯಿಂದ ನೀಡಲಾಗುವ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಈ ಬಾರಿ “ಇಮಯಮ್’ ಖ್ಯಾತಿಯ ತಮಿಳು ಸಾಹಿತಿ ವಿ. ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಹಂಗಾಮಿ ಅಧ್ಯಕ್ಷ ಡಾ| ಬಿ.ಎಲ್. ಶಂಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವು 2013ರಿಂದ ವಿವಿಧ ಭಾಷೆಯ ಖ್ಯಾತ ಸಾಹಿತಿಗಳಿಗೆ ಪ್ರಶಸ್ತಿ ನೀಡುತ್ತಿದೆ ಎಂದರು.
ಇವರು ತಮಿಳಿನಲ್ಲಿ 15 ಕೃತಿಗಳನ್ನು ರಚಿಸಿದ್ದು, ಅವು ಇಂಗ್ಲಿಷ್, ಫ್ರೆಂಚ್, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಗಳಿಗೆ ಅನುವಾದವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. ಡಿ. 29ರಂದು ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.