ತೀರ್ಥಹಳ್ಳಿ: ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪುರಸ್ಕಾರವನ್ನು ಉರ್ದು ಸಾಹಿತ್ಯ ಕ್ಷೇತ್ರದ ಖ್ಯಾತ ಲೇಖಕ ರತನ್ ಸಿಂಗ್ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು.
ತಾಲೂಕಿನ ಕುಪ್ಪಳ್ಳಿಯಲ್ಲಿ ನಡೆದ ಕುವೆಂಪು ಅವರ 114ನೇ ಜನ್ಮ ದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ
ಸಮಾರಂಭದಲ್ಲಿ ಕರ್ನಾಟಕ ಉತ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎ.ಜೆ. ಸದಾಶಿವ ಪ್ರಶಸ್ತಿ ಪ್ರದಾನ ಮಾಡಿದರು.
ರತನ್ ಸಿಂಗ್ ಅವರಿಗೆ ಪ್ರಶಸ್ತಿ ಮೊತ್ತ 2.50 ಲಕ್ಷ ರೂ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಕುವೆಂಪು ಪ್ರತಿಷ್ಠಾನ 2014ರಿಂದ ಈ ಪ್ರಶಸ್ತಿ ನೀಡುತ್ತಿದ್ದು, ಈ ವರೆಗೆ 6 ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುವೆಂಪು ರಾಷ್ಟ್ರೀಯ ಪುರಸ್ಕಾರ ಪಡೆದ ಮತ್ತೋರ್ವ ಉರ್ದು ಲೇಖಕಿ ಹೈದರಾಬಾದಿನ ಡಾ| ಜೀಲಾನಿ ಬಾನೋ ಅನಾರೋಗ್ಯದ ಕಾರಣ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.